ನೇತಾಜಿ ಯುವಕ ಮಂಡಲದ ಜಿಲ್ಲಾಮಟ್ಟದ ಕ್ರೀಡಾಕೂಟ ಮುಂದೂಡಿಕೆ

Prasthutha|

ಮಡಿಕೇರಿ: ನೇತಾಜಿ ಯುವಕ ಮಂಡಲ 30ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನೋತ್ಸವ ಅಂಗವಾಗಿ ಜ.23 ರಂದು ತಾಳತ್ತಮನೆಯ ಆಟದ ಮೈದಾನದಲ್ಲಿ ಏರ್ಪಡಿದ್ದ ಜಿಲ್ಲಾಮಟ್ಟದ ಕ್ರೀಡಾ ಕೂಟವನ್ನು ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಬಿ.ಸುಧೀಪ್ ರೈ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಾಲಿಬಾಲ್ , ಥ್ರೋಬಲ್, ಸಾರ್ವಜನಿಕರಿಗೆ ಮ್ಯಾರಥಾನ್ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮ್ಯಾರಥಾನ್ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು. ಆದರೆ ಕೋವಿಡ್ ಹೆಚ್ಚಾಗುತ್ತಿರುವುದರಿಂದ ಹಾಗೂ ಸರಕಾರದ ವಾರಾಂತ್ಯದ ಕರ್ಫೂ ಇರುವುದರಿಂದ ಕ್ರೀಡಾ ಕೂಟವನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದರು.

Join Whatsapp