ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ದ.ಕ ಜಿಲ್ಲಾಧ್ಯಕ್ಷರ ಭೇಟಿ

Prasthutha|

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಡಿ ಪ್ರದೇಶವಾದ ಹೊಸಂಗಡಿ ಪಂಚಾಯತ್ ವ್ಯಾಪ್ತಿಯ ಪೆರಿಂಜೆ ಮತದಾನ ಕೇಂದ್ರಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸದಾತ್ ಬಜತ್ತೂರು ಭೇಟಿ ನೀಡಿದರು. ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಮತದಾರರಲ್ಲಿ ಮತವನ್ನು ನೀಡಬೇಕೆಂದು ಮನವಿ ಮಾಡಿದರು.

- Advertisement -
   ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಜಿಲ್ಲಾ ಕಾರ್ಯದರ್ಶಿ ಶಾಕೀರ್ ಅಳಕೆಮಜಲು, ಸುಹೈಲ್ ಖಾನ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿ ಫಝಲ್ ಉಜಿರೆ, ಹನೀಸ್ ಗೇರುಕಟ್ಟೆ, ಹಮೀದ್ ವೇಣೂರು, ಜುನೈದ್ ಪಡ್ಡಂದಡ್ಕ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Join Whatsapp