Home ಟಾಪ್ ಸುದ್ದಿಗಳು ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ: ಸರ್ಕಾರಕ್ಕೆ 1 ತಿಂಗಳ ಗಡುವು ನೀಡಿದ ಹೈಕೋರ್ಟ್

ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ: ಸರ್ಕಾರಕ್ಕೆ 1 ತಿಂಗಳ ಗಡುವು ನೀಡಿದ ಹೈಕೋರ್ಟ್

ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಡಿಲಿಮಿಟೇಶನ್ ಮತ್ತು ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಗಡುವು ನೀಡಿದೆ.


ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಪಿಐಎಲ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಂವಿಧಾನದ ನಿಯಮದಂತೆ ಚುನಾವಣೆ ನಡೆಸಬೇಕು. ಈಗಾಗಲೇ 10 ವಾರ ಕಾಲಾವಕಾಶ ನೀಡಲಾಗಿದೆ. ಈಗ 4 ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಅಂತಿಮಗೊಳಿಸಬೇಕು. ಇದು ಕೊನೆಯ ಗಡುವು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

Join Whatsapp
Exit mobile version