ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಕಾನೂನು ಮೀರಿ ಬಂಧಿಸಿದರೆ ನಾಳೆ ದ.ಕ. ಜಿಲ್ಲೆ ಬಂದ್ ಮಾಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಹರೀಶ್ ಪೂಂಜ ಅವರ ಮನೆಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಶಾಸಕರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಶಾಸಕರನ್ನು ಬಂಧಿಸುವ ದುಸ್ಸಾಹಸಕ್ಕೆ ಪೊಲೀಸರು ಕೈಹಾಕಬಾರದು ಎಂದು ಎಚ್ಚರಿಕೆ ನೀಡಿದರು.