ವಿಚ್ಛೇದನ, ಮದುವೆಗೆ ಏಕರೂಪದ ನಾಗರಿಕ ಸಂಹಿತೆ ಅಗತ್ಯ : ದೆಹಲಿ ಹೈಕೋರ್ಟ್

Prasthutha|

ನವದೆಹಲಿ: ಮದುವೆ, ವಿಚ್ಛೇದನ ಹಾಗೂ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಏಕರೂಪದ ನಾಗರಿಕ ಸಂಹಿತೆಯನ್ನು ರೂಪಿಸಲು ಇದು ಸೂಕ್ತಕಾಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

- Advertisement -

ಈಗ ಹಲವಾರು ವೈಯಕ್ತಿಕ ಕಾನೂನುಗಳು ಜಾರಿಯಲ್ಲಿವೆ. ಇವುಗಳು ಸೃಷ್ಟಿಸುವ ಸಂಘರ್ಷ, ವಿರೋಧಾಭಾಸಗಳಿಂದ ನಾಗರಿಕರು ತಿಂದರೆ ಅನುಭವಿಸುವುದನ್ನು ತಪ್ಪಿಸಬೇಕಾದರೆ, ಏಕರೂಪದ ನಾಗರಿಕ ಸಂಹಿತೆ ಜಾರಿಗೊಳಿಸುವುದು ಅಗತ್ಯ ಎಂದು ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಅವರಿರುವ ಏಕಸದಸ್ಯ ನ್ಯಾಯಪೀಠ ಹೇಳಿತು.

ಸಮಾಜದಲ್ಲಿ ಈಗ ಸಾಕಷ್ಟು ಬದಲಾವಣೆ ಕಾಣಬಹುದು. ಧರ್ಮ, ಜಾತಿ ಹಾಗೂ ಸಮುದಾಯಗಳೆಂಬ ಬೇಲಿಗಳು ಕಣ್ಮರೆಯಾಗುತ್ತಿವೆ. ಸಮಾನತೆ ಮನೆ ಮಾಡುತ್ತಿದೆ. ಹೀಗಾಗಿ ಮದುವೆ, ವಿಚ್ಛೇದನ ಹಾಗೂ ಆಸ್ತಿಗಳ ಉತ್ತರಾಧಿಕಾರಕ್ಕೆ ಸಂಬಂಧಪಟ್ಟಂತೆ ಏಕರೂಪ ಸಂಹಿತೆ ಇಂದಿನ ಅಗತ್ಯ ಎಂದರು.

- Advertisement -

ಸಂವಿಧಾನದ 44ನೇ ವಿಧಿಯು ದೇಶಕ್ಕೆ ಏಕರೂಪದ ನಾಗರಿಕ ಸಂಹಿತೆ ಅಗತ್ಯ ಎಂಬುದು ಆಶಯ, ಇದು ಕೇವಲ ಭರವಸೆಯಾಗಿ ಉಳಿಯಬಾರದು ವಿಧಿ ಹೇಳುತ್ತದೆ. ಇಂಥ ಸಂಹಿತೆಯನ್ನು ರೂಪಿಸಿ, ಜಾರಿಗೊಳಿಸಬೇಕು. ಸೂಕ್ತ ಕ್ರಮಕ್ಕಾಗಿ ತೀರ್ಪಿನ ಪ್ರತಿಯನ್ನು ಕಾನೂನು ಸಚಿವಾಲಯದ ಕಾರ್ಯದರ್ಶಿಗೆ ತಲುಪಿಸಬೇಕು ಎಂದು ಹೇಳಿದರು

Join Whatsapp