Home ಟಾಪ್ ಸುದ್ದಿಗಳು ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ | ಮತ್ತೋರ್ವ ಕಾಂಗ್ರೆಸ್ ಮುಖಂಡ, ಮಾಜಿ ಕಾರ್ಪೊರೇಟರ್ ಬಂಧನ

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ | ಮತ್ತೋರ್ವ ಕಾಂಗ್ರೆಸ್ ಮುಖಂಡ, ಮಾಜಿ ಕಾರ್ಪೊರೇಟರ್ ಬಂಧನ

ಬೆಂಗಳೂರು : ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಗಳಲ್ಲಿ ಓರ್ವರಾದ ಮತ್ತೋರ್ವ ಕಾಂಗ್ರೆಸ್ ನಾಯಕ, ಮಾಜಿ ಕಾರ್ಪೊರೇಟರ್ ರಾಕಿಬ್ ಜಾಕೀರ್ ರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ, ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಭಾರೀ ಹೈಡ್ರಾಮ ಮೂಲಕ ಬಂಧಿಸಲಾಗಿತ್ತು. ಇದೀಗ ಜಾಕೀರ್ ಅವರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ತಿರುವನ್ನು ನೀಡಿದೆ.

ಪ್ರವಾದಿ ಅವರ ಬಗ್ಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಅಳಿಯ ಹಾಕಿದ್ದ ವಿವಾದಾತ್ಮಕ ಫೇಸ್ ಬುಕ್ ಪೋಸ್ಟ್ ಗೆ ಸಂಬಂಧಿಸಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ನಡೆದಿತ್ತು.    

Join Whatsapp
Exit mobile version