ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾದ ಡಿ.ಕೆ.ಶಿವಕುಮಾರ್

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಿಗ್ಗೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ.

- Advertisement -

ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್ ಅವರಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಬೆಂಗಳೂರಿನ ಇತಿಹಾಸ ಪುಸ್ತಕವನ್ನು ಸ್ವಹಸ್ತಾ ಕ್ಷಾರದೊಂದಿಗೆ ಪ್ರೀತಿ ಪೂರ್ವಕವಾಗಿ ಉಡುಗೊರೆಯಾಗಿ ನೀಡಿದರು.


ಎಸ್.ಎಂ.ಕೃಷ್ಣ ಅವರ ಮೊಮ್ಮಗ, ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮಾರ್ತ್ಯ ಅವರೊಂದಿಗೆ ಡಿಕೆಶಿ ಮಗಳು ಐಶ್ವರ್ಯಾ 2021ರಲ್ಲಿ ಮದುವೆಯಾಗಿದ್ದರು.

- Advertisement -

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು.



Join Whatsapp