ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಮಂಗಳೂರು ಏರ್ ಪೋರ್ಟ್’ನಲ್ಲಿ ಭರ್ಜರಿ ಸ್ವಾಗತ

Prasthutha|

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ನ್ಯಾಯವಾದಿ, ಬಿಲ್ಲವ ಸಮುದಾಯದ ಸಂಘಟಕ ಪದ್ಮರಾಜ್ ಆರ್.ಗೆ ಟಿಕೆಟ್ ನೀಡಿದೆ. ಈ ಹಿನ್ನೆಲೆ ಇಂದು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪದ್ಮರಾಜ್ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

- Advertisement -

ಬಳಿಕ ಆಧುನಿಕ ಮಂಗಳೂರು ಶಿಲ್ಪಿ ಉಳ್ಳಾಲ ಶ್ರೀನಿವಾಸ್ ಮಲ್ಯರ ಪ್ರತಿಮೆಗೆ ಗೌರವಾರ್ಪಣೆ ಮಾಡಿದರು.
ನಂತರ ಮಂಗಳೂರಿನ ಕದ್ರಿ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕರಿಗೆ, ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದರು.

ಪದ್ಮರಾಜ್ ಅವರ ಪರಿಚಯ

- Advertisement -

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿಯ ಗರಡಿಯಲ್ಲಿ ಪಳಗಿರುವ ಪದ್ಮರಾಜ್ ಸಮಾಜ ಸೇವೆಯನ್ನು ಮೈಗೂಡಿಸಿಕೊಂಡು ಕಿರಿಯ ವಯಸ್ಸಿನಲ್ಲೇ ಕುದ್ರೋಳಿ ಗೋಕರ್ಣನಾಥ ದೇವಳದ ದೊಡ್ಡ ಜವಾಬ್ದಾರಿ ವಹಿಸಿಕೊಂಡು ಗಮನ ಸೆಳೆದವರು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಎಂಬ ಪುಟ್ಟ ಗ್ರಾಮದಲ್ಲಿ ಮಂಗಳೂರು ಮೂಲದ ಎಚ್.ಎಂ. ರಾಮಯ್ಯ ಮತ್ತು ಲಲಿತಾ ದಂಪತಿಯ ದ್ವಿತೀಯ ಪುತ್ರನಾಗಿ ಜನಿಸಿದ ಪದ್ಮರಾಜ್ ಆರ್. ತನ್ನ ಅಣ್ಣ ಮಂಗಳೂರಿನ ಹೃದ್ರೋ ಗ ತಜ್ಞ ಡಾ. ಪುರುಷೋತ್ತಮ ಆರ್. ಅವರಂತೆ ಬಾಲ್ಯದಿಂದಲೇ ಪ್ರತಿಭಾನ್ವಿತರು.


ತನ್ನ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಗಿಸಿ ಮುಂದೆ ಬಿ.ಎ ಪದವಿಯನ್ನು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ಹಾಗೂ ಕಾನೂನು ಪದವಿಯನ್ನು ಮಂಗಳೂರಿನ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ ಮುಗಿಸಿದರು. 1995ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಮಾಜಿ ಸಚಿವ ಜನಾರ್ದನ ಪೂಜಾರಿ ಅವರೊಂದಿಗೆ ಆರಂಭಿಸಿದರು.



Join Whatsapp