Home ಕರಾವಳಿ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ಪೂರೈಕೆ ನಿರಾಕರಣೆ| ಜೂ.20ಕ್ಕೆ ಕೇಂದ್ರದ ವಿರುದ್ಧ ದ.ಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ಪೂರೈಕೆ ನಿರಾಕರಣೆ| ಜೂ.20ಕ್ಕೆ ಕೇಂದ್ರದ ವಿರುದ್ಧ ದ.ಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು : ಕರ್ನಾಟಕ ರಾಜ್ಯ ಸರಕಾರದ ಪ್ರತಿಷ್ಠಿತ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರಕಾರದ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜೂ.20ರಂದು (ಮಂಗಳವಾರ) ಬೆಳಗ್ಗೆ 10:30ಕ್ಕೆ ಮಂಗಳೂರಿನ ಮಿನಿವಿಧಾನ ಸೌಧದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಘನ ಸರಕಾರದ ಅರೋಗ್ಯ ಹಾಗೂ ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಭಾಗವಹಿಸುವರು.

ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಸಂಸದರು, ಸಚಿವರು, ಜಿಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version