ಶಸ್ತ್ರಾಸ್ತ್ರಗಳ ಠೇವಣಿಗೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

Prasthutha|

ಮಂಗಳೂರು: ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಇದೀಗ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ. 

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿವೆ.

ಆದ ಕಾರಣ ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಬೆಳೆ ರಕ್ಷಣೆ ಮತ್ತು ಆತ್ಮ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಪರವಾನಿಗೆದಾರರು ಎಲ್ಲಾ ಶಸ್ತ್ರಾಸ್ತ್ರಗಳನ್ನು 2023ರ ಜು.19ರಿಂದ ಆಗಸ್ಟ್ 1ರವರೆಗೆ ಭಾರತೀಯ ಶಸ್ತ್ರ ಕಾಯಿದೆಯಡಿ ನಮೂನೆ 8ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು. ಈ ಬಗ್ಗೆ ಯಾವುದೇ ಅಕ್ಷೇಪಣೆಗಳಿದ್ದಲ್ಲಿ ತಮ್ಮ ಬೆಳೆ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದೆ ಎಂದಾದಲ್ಲಿ ಈ ಆದೇಶ ಹೊರಡಿಸಿದ ಒಂದು ವಾರದೊಳಗೆ ಪೂರಕ ದಾಖಲೆಗಳೊಂದಿಗೆ ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp