ಮಂಗಳೂರು : ದೇಶದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 9 ರಾಜ್ಯಗಳ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಮಾರ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಮತ್ತು ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರತೀ ಜಿಲ್ಲೆಯ ಜಿಲ್ಲಾಧಿಕಾರಿ, ಆರೋಗ್ಯ ಅಧಿಕಾರಿ, ಇತರೆ ಅಧಿಕಾರಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ದ.ಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಡಿಯೋ ಕನ್ಪರೆನ್ಸ್ ನಡೆಸಲಾಗಿದ್ದು,ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕೈಗೊಂಡ ಕ್ರಮಗಳು,ಆಸ್ಪತ್ರೆಯಲ್ಲಿನ ವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.