ಇಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Prasthutha|

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 1ರ ಮಂಗಳವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

- Advertisement -

ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ 9.55 ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.30ಕ್ಕೆ ಇಲ್ಲಿನ ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕಾಮಗಾರಿಗಳ ವೀಕ್ಷಣೆ ಮಾಡುವರು.

ಸಂಜೆ 4.15ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 10.45ಕ್ಕೆ ಬೆಂಗಳೂರಿಗೆ ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp