ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ರವರನ್ನು SDPI ದಕ್ಷಿಣ ಕನ್ನಡ ಜಿಲ್ಲಾ ನಿಯೋಗವು ಸೌಹಾರ್ದ ಭೇಟಿಯಾಗಿ ಮಾತುಕತೆ ನಡೆಸಿದೆ.
SDPI ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಮಾಲ್ ಜೋಕಟ್ಟೆ, ಅಶ್ರಫ್ ಅಡ್ಡೂರು ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ ಉಪಸ್ಥಿತರಿದ್ದರು.