ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ದ ಮ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಮರ ಮುಂದುವರಿದಿದೆ. ಜಾರಕಿಹೊಳಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಡಿಕೆಶಿ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದರು. ಡಿಕೆ ಶಿವಕುಮಾರ್ ಒಬ್ಬ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್ ಎಂದೆಲ್ಲಾ ರಮೇಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದ್ದರು.
ಇದರಿಂದಾಗಿ ಡಿಸಿಎಂ ಬೆಂಬಲಿಗರು ಸಿಟ್ಟಾಗಿದ್ದಾರೆ. ಸೋಮವಾರ ತಡರಾತ್ರಿ ರಮೇಶ್ ಜಾರಕಿಹೊಳಿಯ ಬೆಂಗಳೂರಿನ ಮನೆಯ ಮುಂದೆ ಪೋಸ್ಟರ್ ಗಳನ್ನು ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಈ ಸಮಯದಲ್ಲಿ ಜಾರಕಿಹೊಳಿ ಮನೆಯ ಗೋಡೆಗಳಿಗೆ ಅವಾಚ್ಯ ಶಬ್ದಗಳ ಬರಹವಿರುವ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಶೇಷಾದ್ರಿಪುರ ಉಪವಿಭಾಗದ ಎಸಿಪಿ ಮತ್ತು ತಂಡ ಪೋಸ್ಟರ್ ಗಳನ್ನು ತೆರವುಗೊಳಿಸಿದ್ದಾರೆ.
ಜಾರಕಿಹೊಳಿ ನಿವಾಸಕ್ಕೆ ಭದ್ರತೆ ಕಲ್ಪಿಸಿದ್ದಾರೆ.