ರಮೇಶ್ ಜಾರಕಿಹೊಳಿ ಮನೆಗೆ ಅವಾಚ್ಯ ಶಬ್ದಗಳ ಪೋಸ್ಟರ್ ಅಂಟಿಸಿದ ಡಿಕೆಶಿ ಫ್ಯಾನ್ಸ್

Prasthutha|


ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ದ ಮ ಮಾಜಿ ಸಚಿವ ರಮೇಶ್ ಜಾರಕಿಹೊಳಿ  ಸಮರ ಮುಂದುವರಿದಿದೆ. ಜಾರಕಿಹೊಳಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಡಿಕೆಶಿ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದರು. ಡಿಕೆ ಶಿವಕುಮಾರ್ ಒಬ್ಬ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್ ಎಂದೆಲ್ಲಾ ರಮೇಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದ್ದರು.

- Advertisement -

ಇದರಿಂದಾಗಿ ಡಿಸಿಎಂ ಬೆಂಬಲಿಗರು ಸಿಟ್ಟಾಗಿದ್ದಾರೆ. ಸೋಮವಾರ ತಡರಾತ್ರಿ ರಮೇಶ್ ಜಾರಕಿಹೊಳಿಯ ಬೆಂಗಳೂರಿನ ಮನೆಯ ಮುಂದೆ ಪೋಸ್ಟರ್ ಗಳನ್ನು ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಈ ಸಮಯದಲ್ಲಿ ಜಾರಕಿಹೊಳಿ  ಮನೆಯ ಗೋಡೆಗಳಿಗೆ ಅವಾಚ್ಯ ಶಬ್ದಗಳ ಬರಹವಿರುವ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಶೇಷಾದ್ರಿಪುರ ಉಪವಿಭಾಗದ ಎಸಿಪಿ ಮತ್ತು ತಂಡ  ಪೋಸ್ಟರ್ ಗಳನ್ನು ತೆರವುಗೊಳಿಸಿದ್ದಾರೆ.
ಜಾರಕಿಹೊಳಿ ನಿವಾಸಕ್ಕೆ ಭದ್ರತೆ ಕಲ್ಪಿಸಿದ್ದಾರೆ.

- Advertisement -

Join Whatsapp