ಹಿಜಾಬ್ ತೀರ್ಪು | ಕಾನೂನು, ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವುದು ಸರ್ಕಾರದ ಜವಾಬ್ದಾರಿ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಹಿಜಾಬ್ ಪ್ರಕರಣದ ಕುರಿತಾಗಿ ಇಂದು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

- Advertisement -

ಈ ವಿವಾದದಲ್ಲಿ ನನಗೆ ದೊಡ್ಡ ಆತಂಕವಿರುವುದು ರಾಜ್ಯದ ಶಿಕ್ಷಣ ಮತ್ತು ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿಯಾಗಿದೆ. ಈ ಪ್ರಕರಣದ ಕುರಿತು ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ, ಆದರೆ ಇಲ್ಲಿ ಸೌಹಾರ್ದ ಕಾಪಾಡಿಕೊಳ್ಳುವುದು ಸರಕಾರದ ಜವಾಬ್ದಾರಿಯಾಗಿದ್ದು, ಈ ವಿಚಾರದಲ್ಲಿ ಸರ್ಕಾರವು ಪ್ರಬುದ್ಧವಾಗಿ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಶಾಲೆ–ಕಾಲೇಜುಗಳಲ್ಲಿ ಮತ್ತು ಸುತ್ತಮುತ್ತ ಕಾನೂನು ಮತ್ತು ಸುವ್ಯವಸ್ಥೆ, ಧರ್ಮ ಮತ್ತು ಲಿಂಗ ಲೆಕ್ಕಿಸದೆ ವಿದ್ಯಾರ್ಥಿಗಳ ಶಿಕ್ಷಣ, ಕೋಮು ಸೌಹಾರ್ದತೆಯ ಖಾತ್ರಿಯನ್ನು ಬಯಸುತ್ತಿದ್ದೇನೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ



Join Whatsapp