Home ಟಾಪ್ ಸುದ್ದಿಗಳು ಹಿಜಾಬ್ ತೀರ್ಪು | ಕಾನೂನು, ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವುದು ಸರ್ಕಾರದ ಜವಾಬ್ದಾರಿ: ಡಿಕೆ ಶಿವಕುಮಾರ್

ಹಿಜಾಬ್ ತೀರ್ಪು | ಕಾನೂನು, ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವುದು ಸರ್ಕಾರದ ಜವಾಬ್ದಾರಿ: ಡಿಕೆ ಶಿವಕುಮಾರ್

ಬೆಂಗಳೂರು: ಹಿಜಾಬ್ ಪ್ರಕರಣದ ಕುರಿತಾಗಿ ಇಂದು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಈ ವಿವಾದದಲ್ಲಿ ನನಗೆ ದೊಡ್ಡ ಆತಂಕವಿರುವುದು ರಾಜ್ಯದ ಶಿಕ್ಷಣ ಮತ್ತು ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿಯಾಗಿದೆ. ಈ ಪ್ರಕರಣದ ಕುರಿತು ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ, ಆದರೆ ಇಲ್ಲಿ ಸೌಹಾರ್ದ ಕಾಪಾಡಿಕೊಳ್ಳುವುದು ಸರಕಾರದ ಜವಾಬ್ದಾರಿಯಾಗಿದ್ದು, ಈ ವಿಚಾರದಲ್ಲಿ ಸರ್ಕಾರವು ಪ್ರಬುದ್ಧವಾಗಿ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಶಾಲೆ–ಕಾಲೇಜುಗಳಲ್ಲಿ ಮತ್ತು ಸುತ್ತಮುತ್ತ ಕಾನೂನು ಮತ್ತು ಸುವ್ಯವಸ್ಥೆ, ಧರ್ಮ ಮತ್ತು ಲಿಂಗ ಲೆಕ್ಕಿಸದೆ ವಿದ್ಯಾರ್ಥಿಗಳ ಶಿಕ್ಷಣ, ಕೋಮು ಸೌಹಾರ್ದತೆಯ ಖಾತ್ರಿಯನ್ನು ಬಯಸುತ್ತಿದ್ದೇನೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ

Join Whatsapp
Exit mobile version