Home ಟಾಪ್ ಸುದ್ದಿಗಳು ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಡಿಕೆಶಿ ಕರೆ: ಆ.31ರಂದು ರಾಜಭವನ ಚಲೋ

ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಡಿಕೆಶಿ ಕರೆ: ಆ.31ರಂದು ರಾಜಭವನ ಚಲೋ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ.


ಕೆಪಿಸಿಸಿ ಕಚೇರಿಯಲ್ಲಿ ಇಂದು (ಮಂಗಳವಾರ) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಆ.31ರಂದು ರಾಜಭವನ ಚಲೋಗೆ ಕರೆ ನೀಡಿ, ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಹೋಗಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್ ಇದೆ ಅದನ್ನು ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸುತ್ತೇವೆ.

ಈ ಹಿನ್ನಲೆ ಎಲ್ಲ ಶಾಸಕರು, ಸಚಿವರು, ಪರಿಷತ್ ಸದಸ್ಯರು ಭಾಗಿಯಾಗಬೇಕು ಎಂದು ಸೂಚನೆ ನೀಡಿದ್ದಾರೆ.

Join Whatsapp
Exit mobile version