ಡಿಕೆಶಿ ಕೇಸ್: ಹೈಕೋರ್ಟ್​ ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸುಪ್ರೀಂ ಸೂಚನೆ

Prasthutha|

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್​ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂಕೋರ್ಟ್ ಸೂಚಿಸಿದೆ.

- Advertisement -

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್​ ಸಿಬಿಐ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ ಗೆ ಮೇಲ್ಮನವಿ ಸಲ್ಲಿಸಿತ್ತು. ಇಂದು (ನವೆಂಬರ್ 10) ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್​ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚಿಸಿದೆ.



Join Whatsapp