ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದ ಮೆಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

- Advertisement -

ದಾಳಿ ವೇಳೆ ಸಿಬಿಐ ಅಧಿಕಾರಿಗಳು ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಭೇಟಿ ನೀಡಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ಡಿಕೆ ಶಿವಕುಮಾರ್ ವಿವರಣೆ ನೀಡಿದ್ದಾರೆ. ಸಿಬಿಐ ಅಧಿಕಾರಿಗಳ ದಾಳಿಗೆ ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರು ಸಾಥ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.