ಆತ ನಮ್ಮ ಮನೆ ಹುಡುಗ | ಕಾರ್ಯಕರ್ತನಿಗೆ ಏಟು ಕೊಟ್ಟ ಬಗ್ಗೆ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Prasthutha: July 11, 2021

ಬೆಂಗಳೂರು : ನಮ್ಮ ಮನೆ ಹುಡುಗನಿಗೆ ನಾನು ಹೊಡೆದೆ. ತಪ್ಪು ಮಾಡಿದಾಗ ನಾವು ಬಯ್ಯುತ್ತೇವೆ. ಅದು ನಮ್ಮ ನಡುವಿನ ಪ್ರೀತಿಯ ಸಂಬಂಧ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಆತ ನಮ್ಮ ಹುಡುಗ, ನಮ್ಮ ದೂರದ ಸಂಬಂಧಿ. ಹೆಗಲ ಮೇಲೆ ಕೈ ಹಾಕಿದಾಗ ಬೇರೆಯವರು ಏನು ತಿಳಿಯುತ್ತಾರೆ ಎಂದು ಬೈದೆ. ಜೋರಾಗಿ ಹೊಡೆದದ್ದೂ ನಿಜ. ತಪ್ಪು ಮಾಡಿದಾಗ ಬಯ್ಯುವುದು ಸಹಜ. ಅದು ನಮ್ಮ ಪ್ರೀತಿಯ ಸಂಬಂಧ. ನಾವು, ಅವರು ಎಲ್ಲ ತಪ್ಪು ಮಾಡುತ್ತೇವೆ. ನಿಮ್ಮ ಖುಷಿಗೆ ನೀವು ಅದನ್ನು ತೋರಿಸುತ್ತಿದ್ದೀರಿ. ನೀವು ಅವನನ್ನು ನಾಯಕನನ್ನಾಗಿ ಮಾಡಿ ಎಂದು ಹೇಳಿದರು

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ