April 8, 2021

ಕಾಂಗ್ರೆಸ್ ರಾಜಕಾರಣ ನೀತಿಯ ಮೇಲೆ ಹೊರತು ಜಾತಿಯ ಮೇಲಲ್ಲ : ಡಿ.ಕೆ ಶಿವಕುಮಾರ್

ಬೆಳಗಾವಿ: ಕಾಂಗ್ರೆಸ್ ಗೆ ಎಲ್ಲ ಸಮುದಾಯದವರೂ ಒಂದೇ. ಲಿಂಗಾಯಿತರಾಗಿರಲಿ, ಮರಾಠರಾಗಿರಲಿ, ಪರಿಶಿಷ್ಟರಾಗಿರಲಿ  ಅಥವಾ ಬೇರೆ ಯಾರೇ ಆಗಿರಲಿ, ಅವರೆಲ್ಲರೂ ನಮ್ಮ ಅಣ್ಣ ತಮ್ಮಂದಿರು. ಬಿಜೆಪಿ ಮಾತ್ರ ಎಲ್ಲರನ್ನು ಬೇರೆ ಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ ನೀತಿಯ ಮೇಲೆ ರಾಜಕಾರಣ ಮಾಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

“ಚುನಾವಣೆ ವಿಚಾರವಾಗಿ ನಾನು ನಮ್ಮ ನಾಯಕರ ಜತೆ ಚರ್ಚೆ ನಡೆಸುತ್ತಿದ್ದೇನೆ. ಬೆಳಿಗ್ಗೆ ರೈತ ಮುಖಂಡರಾದ ಬಾಬಾಗೌಡ ಪಾಟೀಲ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಎಲ್ಲ ಕಮ್ಯುನಿಷ್ಟ್ ನಾಯಕರ ಜತೆ, ಚಾಲಕರ ಸಂಘ, ಆಟೋ ಚಾಲಕರು, ನೇಕಾರರನ್ನು ಭೇಟಿ ಮಾಡಲಿದ್ದೇನೆ. ಧರ್ಮಪೀಠಗಳಿಗೆ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದೇನೆ. ಅವರೆಲ್ಲ ಗೌರವದಿಂದ ನಮ್ಮ ಅಭ್ಯರ್ಥಿ ಬಗ್ಗೆ ಅನುಕಂಪ ಹೊಂದಿದ್ದಾರೆ” ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಾರೆ.

ಈ ಸರ್ಕಾರಕ್ಕೆ ಒಂದು ಸಂದೇಶವನ್ನೂ ಕಳುಹಿಸಬೇಕಿದೆ. ನೂರಾರು ದಿನದಿಂದ ನಮ್ಮ ರೈತರು ಧರಣಿ ಮಾಡುತ್ತಿದ್ದರೂ ಅವರನ್ನು ಮಾತನಾಡಿಸಿಲ್ಲ. ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರೈತರಿದ್ದು, ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ತಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಮತದಾರರು ನಮಗೆ ಮತ ಕೊಡಬೇಕು ಎಂದು ಕೇಳಿಕೊಳ್ಳುತ್ತೇನೆ.

ನಮಗೆ ಲಿಂಗಾಯತರು, ಮರಾಠಿಗರು ನಮಗೆ ಅಣ್ಣತಮ್ಮಂದಿರು. ಅವರೆಲ್ಲ ನಮಗೆ ಒಂದೇ. ಎಲ್ಲ ಜನಾಂಗದವರೂ ಸೇರಿ ನಾವೆಲ್ಲರೂ ಒಂದು. ಬಿಜೆಪಿಯವರು ಬೇರೆ ಬೇರೆ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಿಗೆ ಮತದಾನ ಹಕ್ಕು ನೀಡಲಾಗಿದೆ.ಅವರೆಲ್ಲರೂ ಒಂದೇ. ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆ ಮೂಲಕ ಜಗದೀಶ್ ಶೆಟ್ಟರ್ ಅವರಿಗೆ ಮಾತನಾಡಲು ಶಕ್ತಿ ನೀಡಿದ್ದೇವಲ್ಲ, ರೈಲು, ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಧೆಗಳು ಸೇರಿದಂತೆ ಎಲ್ಲ ಶಕ್ತಿಯನ್ನು ಕೊಟ್ಟಿರುವುದು ಕಾಂಗ್ರೆಸ್. ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ನಾವು ನೌಕರರಿಗೆ ಬೆಂಬಲ ನೀಡುತ್ತೇವೆ. ಸರ್ಕಾರ ಅವರೊಂದಿಗೆ ಕೂತು, ಅವರ ನೋವು ಕೇಳಿ, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು. ಮುಷ್ಕರವನ್ನು ಹತ್ತಿಕುವ ಪ್ರಯತ್ನ ಮಾಡಬಾರದು. ಸರ್ಕಾರ ಅವರ ಮೇಲೆ ನಡೆಸುತ್ತಿರುವ ಧೋರಣೆ ಸರಿಯಲ್ಲ.’ ಎಂದು ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!