Home ಟಾಪ್ ಸುದ್ದಿಗಳು ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಿಬಿಐಗೆ ನೋಟಿಸ್ ಕಳುಹಿಸಿದ ಹೈಕೋರ್ಟ್

ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಿಬಿಐಗೆ ನೋಟಿಸ್ ಕಳುಹಿಸಿದ ಹೈಕೋರ್ಟ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಸುನಿಲ್ ದತ್ ಯಾದವ್ ನೇತೃತ್ವದ ಏಕಸದಸ್ಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು.

ಡಿಕೆ ಶಿವಕುಮಾರ್ ಪರವಾಗಿ ವಾದಿಸಿದ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ ಮತ್ತು ಸಿ.ಎಚ್.ಜಾಧವ್ ಅವರು ಅಕ್ಟೋಬರ್ 3, 2020 ರಂದು ದಾಖಲಾದ ಎಫ್ ಐಆರ್ ಕಾನೂನುಬಾಹಿರವಾಗಿದೆ ಎಂದು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆ 2017ರ ಆಗಸ್ಟ್ 2ರಂದು ಕರ್ನಾಟಕ ಮತ್ತು ದೆಹಲಿಯಲ್ಲಿ ಶಿವಕುಮಾರ್ ಅವರ ಆಸ್ತಿಗಳ ಮೇಲೆ ದಾಳಿ ನಡೆಸಿತ್ತು. ಅವರ ವಿರುದ್ಧ ಕ್ರಮ ಕೈಗೊಳ್ಳಲು 2019ರ ಸೆಪ್ಟೆಂಬರ್ 25ರಂದು ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಪ್ರಾಥಮಿಕ ತನಿಖೆಯ ನಂತರ, ಸಿಬಿಐ ಅಕ್ಟೋಬರ್ 3, 2020 ರಂದು ಎಫ್ ಐಆರ್ ದಾಖಲಿಸಿತ್ತು.

Join Whatsapp
Exit mobile version