ಆಟೋ ಡ್ರೈವಿಂಗ್ ಮಾಡಿ ಗಮನ ಸೆಳೆದ ಡಿಕೆಶಿ

Prasthutha|

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಗುರುವಾರದಂದು ಆಟೋ ಓಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಆಟೋ ಚಾಲಕರ ಜೊತೆಗೆ ಸಂವಾದದ ವೇಳೆ ಡಿ.ಕೆ ಶಿವಕುಮಾರ್ ಆಟೋ ಚಾಲನೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಇಂದು ನಾನು ಪವಿತ್ರ ಆಟೋ ಚಾಲನೆ ಮಾಡಿದ್ದೇನೆ. ನನ್ನ ಜೀವನದಲ್ಲಿ ಈ ದಿನವನ್ನು ನಾನು ಯಾವತ್ತೂ ಮರೆಯುದಿಲ್ಲ. ನೀವು ಸ್ವಾಭಿಮಾನದ ಬದುಕು ನಡೆಸುತ್ತಿದ್ದೀರಿ. ಈ ದೇಶದ ಜನ ಸೇವಕರು ನೀವು. ಜನ ಎಲ್ಲಿಗೆ ಹೋಗಬೇಕು ಎನ್ನುತ್ತಾರೋ ಅಲ್ಲಿಗೆ ತಲುಪಿಸುವ ಪವಿತ್ರ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಕುಟುಂಬದವನಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

- Advertisement -

ಬಿಜೆಪಿ ನಾಯಕರ ರೀತಿ ನಾವು ಸುಳ್ಳು ಆಶ್ವಾಸನೆ ಕೊಡುವುದಿಲ್ಲ. ಕಳೆದ 3 ವರ್ಷದಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಜನಪರವಾಗಿದೆ. ಕಳೆದ ಮೂರು ವರ್ಷಗಳಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಯುಗಾದಿ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ. ಈ ರೀತಿ ನೀವೂ ಹಾರೈಸಿ ಎಂದು ಡಿಕೆಶಿ ಹೇಳಿದರು.

ಬಿಜೆಪಿಯವರು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ಕೊಡುತ್ತೇವೆ ಎಂದಿದ್ದರು. ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು, ಏನಾದ್ರೂ ಮಾಡಿದ್ರಾ ಆದ್ರೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿಯೇ ತೀರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದರು.

- Advertisement -