ಶೆಟ್ಟರ್​​ ಬಿಜೆಪಿಗೆ ಸೇರ್ಪಡೆ ಬೆನ್ನಲ್ಲೇ ಲಕ್ಷ್ಮಣ ಸವದಿ ಜತೆ ಮಾತುಕತೆ ನಡೆಸಿದ ಡಿಕೆಶಿ

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾಗಿದ್ದು, ಕಾಂಗ್ರೆಸ್​​​ ಗೆ ಶಾಕ್ ನೀಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿಯಿಂದ ಬಂದಿರುವ ಮತ್ತೊಬ್ಬ ನಾಯಕ ಲಕ್ಷ್ಮಣ್ ಸವದಿ ಬಳಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ.

- Advertisement -

ಶಿವಕುಮಾರ್ ಅವರು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಭೇಟಿ ಮಾಡಿ ಅವರನ್ನು ಕಾಂಗ್ರೆಸ್‌ನಲ್ಲೇ ಉಳಿಸಿಕೊಳ್ಳಲು ಮಾತುಕತೆ ನಡೆಸಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಸೇರಿದ ಬಿಜೆಪಿ ನಾಯಕರಲ್ಲಿ ಸವದಿ ಕೂಡ ಒಬ್ಬರು, ಅವರು ಮೇ 10 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್‌ಗೆ ಸೇರಿದ್ದರು.



Join Whatsapp