ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜೂನ್ 1ರಿಂದ ಯಾರೂ ಕರೆಂಟ್ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದ ಡಿಕೆ ಶಿವಕುಮಾರ್

Prasthutha|

ಮಳವಳ್ಳಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜೂನ್ 1ರಿಂದ ಯಾರೂ ಕರೆಂಟ್ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಐದು ಗ್ಯಾರಂಟಿ ಭರವಸೆ ನೀಡಿದ್ದು, ಜೂನ್ 1 ರಿಂದ ಕಾಂಗ್ರೆಸ್ ಪಕ್ಷದ ಹೊಸ ಸರ್ಕಾರ ಬರುತ್ತದೆ. ಅಲ್ಲಿಂದ ಯಾರು ಕರೆಂಟ್ ಬಿಲ್ಲನ್ನು ಕಟ್ಟುವ ಅವಶ್ಯಕತೆ ಇರುವುದಿಲ್ಲ ಎಂದು ಹೇಳಿದ್ದಾರೆ.

ಪಕ್ಷವು ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಪ್ರತಿ ಕುಟುಂಬಕ್ಕೆ ಹೊಸ ಸರಕಾರದ ವತಿಯಿಂದ 24 ಸಾವಿರ ಬರುತ್ತದೆ. ಬಡವರು ಹಸಿವಿನಿಂದ ಬಳಲಬಾರದು ಎಂಬ ನಿಟ್ಟಿನಲ್ಲಿ ಅನ್ನಭಾಗ್ಯ ಯೋಜನೆಯಡಿ ಪ್ರತಿ ಕುಟುಂಬಕ್ಕೆ 10 ಕೆಜಿ ಕೊಡುತ್ತೇವೆ. ಪದವಿ ಮಾಡಿರುವ ಯುವಕ, ಯುವತಿಯರಿಗೆ ಪ್ರೋತ್ಸಾಹ ಧನ ನೀಡುತ್ತೇವೆ. ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ. ಇವುಗಳನ್ನೆಲ್ಲಾ ಜಾರಿಗೆ ತರದಿದ್ದರೆ ಮತ್ತೆ ನಾವು ನಿಮ್ಮಲ್ಲಿ ಓಟು ಕೇಳೋಕೆ ಬರಲ್ಲ. ಇದು ಕಾಂಗ್ರೆಸ್ ಪಕ್ಷದ ಶಪಥ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ.

- Advertisement -

ಯುವಕರಿಗೆ ಕೆಲಸ ಕೊಡುತ್ತೇವೆ ಅಂತ ಬಿಜೆಪಿ ಹೇಳಿತ್ತು. ಆದರೆ ಆ ಮೇಲೆ ಪಕೋಡ ಮಾರಿ ಅಂತ ಹೇಳಿದರು. ಪದವಿ ಓದಿ ಪಕೋಡ ಮಾರಾಟ ಮಾಡಬೇಕಾ? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.



Join Whatsapp