ಮತದಾರರಿಗೆ ಆಮಿಷ, ಬೆದರಿಕೆ ಆರೋಪ: FIR ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆಶಿ

Prasthutha|

ಬೆಂಗಳೂರು: ಮತದಾರರಿಗೆ ಬೆದರಿಕೆ ಹಾಕಿರುವ ಮತ್ತು ಆಮಿಷವೊಡ್ಡಿರುವ ಆರೋಪದಲ್ಲಿ ತಮ್ಮ ವಿರುದ್ಧ ಬೆಂಗಳೂರಿನ ಆರ್ ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿರುವುದನ್ನು ಪ್ರಶ್ನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -


ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ರಾಜರಾಜೇಶ್ವರಿ ನಗರದ ಅಪಾರ್ಟ್ ಮೆಂಟೊಂದರಲ್ಲಿ ಮತಯಾಚನೆ ಮಾಡಿದ್ದ ಡಿಕೆ ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿ ಅವರನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿತ್ತು. ನಂತರ ಆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಡಿಕೆ ಶಿವಕುಮಾರ್ ವಿರುದ್ಧ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು.

Join Whatsapp