ನಾಯಕರ ವಿರುದ್ಧ ಬಹಿರಂಗವಾಗಿ ಮಾತನಾಡಿದರೆ ಶಿಸ್ತುಕ್ರಮ: ಡಿಕೆಶಿ

Prasthutha|

ಬೆಂಗಳೂರು: ನಾಯಕರ ವಿರುದ್ಧ ಯಾರೂ ಬಹಿರಂಗವಾಗಿ ಮಾತನಾಡಬಾರದು. ಭಿನ್ನಾಭಿಪ್ರಾಯಗಳು ಏನೇ ಇದ್ರೂ ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಬೇಕು. ಅದನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುತ್ತೇನೆ ಎಂದು ಡಿ.ಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

- Advertisement -

ಕಾಂಗ್ರೆಸ್ ಮುಖಂಡ ಅಖಂಡ ಶ್ರೀನಿವಾಸ್ ಅವರು ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಹೈಕಮಾಂಡ್​ʼಗೆ ದೂರು ನೀಡುತ್ತೇನೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ ಅಖಂಡ ಶ್ರೀನಿವಾಸ್ ಮೂರ್ತಿ ಇರಲಿ, ಯಾರೇ ಇರಲಿ, ಯಾವ ನಾಯಕರ ವಿರುದ್ಧವೂ ಯಾರೂ ಬಹಿರಂಗವಾಗಿ ಮಾತನಾಡಬಾರದು. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಬೇಕು. ಅದನ್ನು ಉಲ್ಲಂಘಿಸಿದರೆ ಶಿಸ್ತುಕ್ರಮ ಕೈಗೊಳ್ತೇನೆ ಎಂದಿದ್ದಾರೆ.

- Advertisement -