Home ಟಾಪ್ ಸುದ್ದಿಗಳು ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ: ಡಿ.ಕೆ ಶಿವಕುಮಾರ್ ಆಕ್ರೋಶ

ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ: ಡಿ.ಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು: “ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಚರ್ಚಿಸದೆ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಜರೂರತ್ತು ಏನಿತ್ತು.?” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದು ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ.? ಆಕ್ಸಿಜನ್ ಸಿಗದೆ ಕೋವಿಡ್ ಸಮಯದಲ್ಲಿ ಸತ್ತವರಿಗೆ ಇದು ಮರುಜೀವ ನೀಡುವುದೇ.?” ಎಂದು ಮತಾಂತರ ಕಾಯ್ದೆಯ ಅನುಷ್ಠಾನದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


“ಇದು, ಸುಳ್ಳು ಆರೋಪಗಳ ಮೇಲೆ ಅಲ್ಪಸಂಖ್ಯಾತರಿಗೆ ತೊಂದರೆ ಕೊಡುವ ತಂತ್ರವೇ.?” ಎಂದೂ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಡಿ.ಕೆ ಶಿವಕುಮಾರ್, ಸರ್ಕಾರದ ಈ ಅಸಾಂವಿಧಾನಿಕ ನಡೆಯನ್ನು ಖಂಡಿಸಿದ್ದಾರೆ.

Join Whatsapp
Exit mobile version