ಬೆಳಗಾವಿ: ಮತಾಂತರ ತಡೆ ಕಾಯ್ದೆ ರಾಜ್ಯಕ್ಕೆ ಕಪ್ಪು ಚುಕ್ಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಶಾಂತಿ ಮೂಡಿಸಲು ಬಿಜೆಪಿಯವರು ಮತಾಂತರ ತಡೆ ಕಾಯ್ದೆ ತರುತ್ತಿದ್ದಾರೆ. ಇದರಿಂದ ಎಲ್ಲರಿಗೂ ಕಸಿವಿಸಿ ಆಗುತ್ತಿದೆ. ಮಾನಸಿಕವಾಗಿ ಹಿಂಸೆ ಕೊಡುವ ಕೆಲಸ ಆಗುತ್ತಿದೆ. ಈ ಕಾನೂನು ಮಾಡುವುದು ಸರಿಯಲ್ಲ. ಇದನ್ನು ನಾವು ಖಂಡಿಸುತ್ತೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಈ ಕಾಯ್ದೆ ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ. ಎಲ್ಲಿಯೂ ಬಲವಂತವಾಗಿ ಮತಾಂತರ ಆಗಿಲ್ಲ. ಖಂಡಿತವಾಗಿಯೂ ಈ ಕಾಯ್ದೆಯನ್ನು ವಿರೋಧಿಸುತ್ತೇವೆ. ನಾವು ಮೊದಲಿನಿಂದಲೂ ವಿರೋಧಿಸುತ್ತಿದ್ದೇವೆ. ಸಂವಿಧಾನಕ್ಕೆ ವಿರುದ್ಧವಾಗಿ ಕಾಯ್ದೆ ತರಲಾಗುತ್ತಿದೆ’ ಎಂದು ದೂರಿದರು.