ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದ ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ವಿಧಾನ ಪರಿಷತ್​ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ನ ಪುಟ್ಟಣ್ಣ ಭರ್ಜರಿ ಜಯಗಳಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ‘ಇಂದು ಕರ್ನಾಟಕ ರಾಜ್ಯ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ವಿಶೇಷ ದಿನ. ಬಿಜೆಪಿ, ಜೆಡಿಎಸ್​ನವರು ಒಟ್ಟಾಗಿ ಒಬ್ಬ ಅಭ್ಯರ್ಥಿ ಮಾಡಿ ಓರ್ವನನ್ನ ಕಣಕ್ಕಿಳಿಸಿದ್ದರು. ಆದರೆ, ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಪರಿಷತ್​ ಉಪ ಚುನಾವಣೆಯ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ರಾಜ್ಯಕ್ಕೆ ದಿಕ್ಸೂಚಿಯಾಗಿದೆ ಎಂದರು.

- Advertisement -

ಶಿಕ್ಷಕರು ಬಹಳ ವಿದ್ಯಾವಂತರಿದ್ದಾರೆ, ನಮ್ಮ‌ ಪುಟ್ಟಣ್ಣ ಅವರನ್ನ ಆಯ್ಕೆ ಮಾಡಿದ್ದಾರೆ. ಅವರೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೆನೆ. ಇನ್ನು ಈ ಬಾರಿ ಗೆಲ್ಲುವ ಮೂಲಕ ಪುಟ್ಟಣ್ಣ ಅವರು ಐದನೇ ಬಾರಿ ಆಯ್ಕೆಯಾಗಿದ್ದಾರೆ. ಅವರು ಶಿಕ್ಷಕರ ಧ್ವನಿಯಾಗಿ ಕೆಲಸ‌ ಮಾಡಿದ್ದಾರೆ.



Join Whatsapp