Home ಟಾಪ್ ಸುದ್ದಿಗಳು ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಅಶ್ವಥ್ ನಾರಾಯಣ್

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಅಶ್ವಥ್ ನಾರಾಯಣ್

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.


ಶೇಷಾದ್ರಿಪುರಂ ಗುಂಡೂರಾವ್ ಕ್ರೀಡಾಂಗಣದಲ್ಲಿ ಪಶ್ಚಿಮ ವಲಯದ ಮಲ್ಲೇಶ್ವರಂ, ಗಾಂಧಿನಗರ ಮತ್ತು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳನ್ನ ಒಟ್ಟುಗೂಡಿಸಿಕೊಂಡು ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಶ್ವಥ್ ನಾರಾಯಣ್ ಅವರು ವೇದಿಕೆ ಮೇಲೆಯೇ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಅಂತಾ ಆಶಿಸಿದರು.


ಜನರನ್ನ ನೇರವಾಗಿ ತಲುಪುವ ಕೆಲಸವನ್ನು ಡಿಕೆ ಶಿವಕುಮಾರ್ ಅವರು ಮಾಡುತ್ತಿದ್ದಾರೆ. ಅವರಿಗೆ ಈಗ ಡಿಸಿಎಂ ಸ್ಥಾನ ಕೊಟ್ಟಿದ್ದಾರೆ. ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅಂತಾ ಆಶಿಸುತ್ತಾ ಮುಂದಿನ ದಿನಗಳಲ್ಲಿ ಉನ್ನತ ಮಟ್ಟಕ್ಕೆ ಹೋಗಿ ಮುಖ್ಯಮಂತ್ರಿ ಕೂಡ ಆಗಲಿ ಎಂದು ಶುಭ ಹಾರೈಸಿದರು.


ಕರ್ನಾಟಕ ಸರ್ಕಾರ ಉತ್ತಮವಾದ ಕಾರ್ಯಕ್ರಮ ರೂಪಿಸಿದೆ. ನಮ್ಮ ಪಶ್ಚಿಮ ವಲಯದಲ್ಲಿ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಕಾರ್ಯಕ್ರಮ ರೂಪಿಸಿದ್ದಾರೆ. ಜನರ ಕುಂದುಕೊರತೆಗಳನ್ನ ಆಲಿಸುತ್ತಾ ಇದ್ದಾರೆ ಅವರಿಗೆ ಹೃತ್ಪೂರ್ವಕವಾದ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.

ಬೆಂಗಳೂರು ನಗರ ಭರವಸೆ ನಗರ. ಬದುಕು ಕಟ್ಟಿಕೊಳ್ಳೋಕೆ ಈ ಕನಸಿನ ನಗರದಲ್ಲಿ ಹಲವಾರು ವರ್ಷಗಳಿಂದ ನೆಲೆಸಿದ್ದಾರೆ. ಬಹುದೊಡ್ಡ ಕೀರ್ತಿ ಈ ನಗರಕ್ಕೆ ಇದೆ. ಅದೇ ರೀತಿ ಕೊರತೆ ಕೂಡ ಇದೆ. ಬೆಂಗಳೂರು ನಗರದಲ್ಲಿ ಶ್ರಮಿಕರು ತುಂಬಾ ಜನ ಇದ್ದಾರೆ, ಬಡವರೂ ಇದ್ದಾರೆ, ಅವರ ಕೈ ಹಿಡಿಯುವಂತಹ ಕೆಲಸ ಡಿಕೆ ಶಿವಕುಮಾರ್ ಮಾಡಲಿ. ವಸತಿ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ಕೊಡಿ ಎಂದು ಮಾಜಿ ಡಿಸಿಎಂ ಆಗ್ರಹಿಸಿದರು.

Join Whatsapp
Exit mobile version