ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆ: ಅಮಿತ್ ಶಾ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಕೆಂಡಾಮಂಡಲ

Prasthutha|

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಯಾಗುತ್ತದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಕಾಂಗ್ರೆಸ್ ಕೆಂಡಾಮಂಡಲವಾಗಿದೆ.

- Advertisement -


ಈ ಬಗ್ಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೇವಲ ರಾಜಕೀಯಕ್ಕಾಗಿ ಕೇಂದ್ರ ಗೃಹ ಸಚಿವರು ಇಷ್ಟು ಕೀಳುಮಟ್ಟಕ್ಕಿಳಿದಿರುವುದು ನಾಚಿಕೆಗೇಡಿನ ಸಂಗತಿ. ಬಿಜೆಪಿಯಿಂದ ಮಾತ್ರ ಇಂಥ ಅನಾಗರಿಕ ನಡೆ ಸಾಧ್ಯ. BJP ಆಡಳಿತಕ್ಕಿಂತ ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ಜನರು ಯಾವಾಗಲೂ ಸುರಕ್ಷಿತವಾಗಿರುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ ಸಮಾನತೆ ಮತ್ತು ಶಾಂತಿಯನ್ನು ಸಾರಿದ ಬಸವಣ್ಣನವರ ನಾಡಿದು ಎಂದು ತಿರುಗೇಟು ನೀಡಿದ್ದಾರೆ.


ಕೇಂದ್ರ ಗೃಹ ಸಚಿವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಅನುಭವಿಸುತ್ತಾರೆ. ಬಿಜೆಪಿ ಪಾಪದ ಕೊಡ ತುಂಬಿದೆ. ಮೇ 13ಕ್ಕೆ ತಕ್ಕ ಶಾಸ್ತಿಯಾಗಲಿದೆ ಎಂದು ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.



Join Whatsapp