ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅಧಿಕಾರದ ಮದದಿಂದ ಮಾತನಾಡುತ್ತಿದ್ದಾರೆ. ಇದು ಅವರಿಗೆ ಗೌರವ ತರುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಡಿಜೆ ಹಳ್ಳಿ/ಕೆಜಿ ಹಳ್ಳಿ ಪ್ರಕರಣದ ಆರೋಪಿಗಳ ವಿಚಾರದಲ್ಲಿ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಡಿಕೆಶಿ ಹೇಳಿದ್ದನ್ನೆಲ್ಲ ನೋಡಿದ್ದೀನಿ. ಅಧಿಕಾರ ಮದದಿಂದ ಅವರು ಏನೇನೋ ಮಾತಾಡ್ತಿದಾರೆ, ಅದು ಅವರಿಗೆ ಗೌರವ ತರೋದಿಲ್ಲ ಎಂದರು.
ಲೋಕಸಭೆ ಚುನಾವಣೆಯ ಪೂರ್ವತಯಾರಿಗಳ ಕುರಿತು ಚರ್ಚಿಸಲು ಬಿಜೆಪಿ ಯಲಹಂಕದಲ್ಲಿರುವ ರೆಸಾರ್ಟ್ವೊಂದರಲ್ಲಿ ಹೈವೋಲ್ಟೇಜ್ ಸಭೆ ಹಮ್ಮಿಕೊಂಡಿದೆ. ಸಭೆಯಲ್ಲಿ ಬಿಎಸ್ ವೈ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ಅರವಿಂದ್ ಲಿಂಬಾವಳಿ ಸೇರಿದಂತೆ ಅನೇಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.