ಬೆಂಗಳೂರು: ಉಪಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಡಿ.ಕೆ. ಶಿವಕುಮಾರ್ ಭೇಟಿ ಮಾಡಿದರು.
ಡಾಲರ್ಸ್ ಕಾಲನಿಯಲ್ಲಿರುವ ಬಿ.ಎಸ್. ಯಡಿಯೂರಪ್ಪ ಅವರ ಮನೆ ʼಧವಳಗಿರಿʼಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಸುಮಾರು 25 ನಿಮಿಷ ಮಾತುಕತೆ ನಡೆಸಿದರು.
ಡಿ.ಕೆ. ಶಿವಕುಮಾರ್ ಅವರನ್ನು ಬಾಗಿಲವರೆಗೆ ಆಗಮಿಸಿ ಹೂಗುಚ್ಛ ನೀಡಿ ಬಿ.ಎಸ್. ಯಡಿಯೂರಪ್ಪ ಆತ್ಮೀಯವಾಗಿ ಸ್ವಾಗತಿಸಿದರು. ಯಡಿಯೂರಪ್ಪ ಅವರನ್ನು ಡಿ.ಕೆ. ಶಿವಕುಮಾರ್ ಸನ್ಮಾನಿಸಿದರು.