Home ಟಾಪ್ ಸುದ್ದಿಗಳು ಸಿಎಂ, ಡಿಸಿಎಂ ವಾಕ್ಸಮರ | ಬಾಯಿಗೆ ಬೀಗ ಹಾಕಿಕೊಳ್ಳದಿದ್ದರೆ ಶಿಸ್ತುಕ್ರಮ: ಡಿಕೆಶಿ ಖಡಕ್ ಎಚ್ಚರಿಕೆ

ಸಿಎಂ, ಡಿಸಿಎಂ ವಾಕ್ಸಮರ | ಬಾಯಿಗೆ ಬೀಗ ಹಾಕಿಕೊಳ್ಳದಿದ್ದರೆ ಶಿಸ್ತುಕ್ರಮ: ಡಿಕೆಶಿ ಖಡಕ್ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ವಿಚಾರವಾಗಿ ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೆ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದರು.


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ. ನಾನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿ ನೋಟಿಸ್ ನೀಡುತ್ತೇವೆ ಎಂದು ಹೇಳಿದ್ದಾರೆ.

Join Whatsapp
Exit mobile version