Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ಬಳಿಕ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ: ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಬಳಿಕ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ: ಶಾಸಕ ಬಾಲಕೃಷ್ಣ

ಬೆಂಗಳೂರು: ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದರು.


ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.


ಶಾಸಕರು ಚರ್ಚೆ ಮಾಡುತ್ತಿಲ್ಲ, ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ. ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆಶಿ ಆವರು ಸಿಎಂ ಆಗ್ತಾರೆ, ಸಿದ್ದರಾಮಯ್ಯ ಬಳಿಕ ಅವರೇ ಆಗಬೇಕಲ್ವಾ? ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ? ಆದ್ರೆ ಈ ಅವಧಿಯಲ್ಲೇ ಆಗ್ತಾರ ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಅಂತ ಪ್ರಶ್ನೆ ಮಾಡಿದರು.

ಒಕ್ಕಲಿಗರ ಸಂಘದಿಂದ ಡಿಕೆಶಿ ಸಿಎಂ ಮಾಡಲು ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೊ ಹೇಳಿದ್ರು ಅಂದ ಮಾತ್ರಕ್ಕೆ ಹೇಳಿದವರನ್ನೆಲ್ಲಾ ಸಿಎಂ ಮಾಡೋದಕ್ಕೆ ಆಗಲ್ಲ. ಅವರು ಜಾತಿ ಅಭಿಮಾನದಿಂದ ಹೇಳಿದ್ದಾರೆ. ಹೈಕಮಾಂಡ್ ನಾಯಕರು ಅಂತಿಮ ನಿರ್ಧಾರ ಮಾಡ್ತಾರೆ ಎಂದರು.

Join Whatsapp
Exit mobile version