Home ಟಾಪ್ ಸುದ್ದಿಗಳು ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸು: ಶುಭ ಹಾರೈಸಿದ ಡಿಕೆ ಶಿವಕುಮಾರ್

ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸು: ಶುಭ ಹಾರೈಸಿದ ಡಿಕೆ ಶಿವಕುಮಾರ್

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.


ಜತೆಗೆ, ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿಕೆ ಶಿವಕುಮಾರ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

Join Whatsapp
Exit mobile version