Home ಟಾಪ್ ಸುದ್ದಿಗಳು ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಆರೋಪ ಅರ್ಜಿ: ವಿಚಾರಣೆ ಮುಂದಕ್ಕೆ

ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಆರೋಪ ಅರ್ಜಿ: ವಿಚಾರಣೆ ಮುಂದಕ್ಕೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇದೇ 29ಕ್ಕೆ ನಿಗದಿಪಡಿಸಿದೆ.

ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಮಧ್ಯಂತರ ಮತ್ತು ಮೂಲ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದರು. ಅಂತೆಯೇ, ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

Join Whatsapp
Exit mobile version