ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತದ ಹಿಂದೆ ಡಿಕೆಶಿ ಇದ್ದಾರೆ: ಕಟೀಲ್ ಶಂಕೆ

Prasthutha|

ಬೆಂಗಳೂರು: ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರ ಮೇಲೆ ಮೊಟ್ಟೆ ಎಸೆದಿರುವುದರ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕೈವಾಡ ಇರಬಹುದೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಶಂಕೆ ವ್ಯಕ್ತಪಡಿಸಿದ್ದಾರೆ.

- Advertisement -

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದೂ ಧರ್ಮದ ಮೇಲೆ, ಸಾವರ್ಕರ್​ ಗೆ ಅವಮಾನ ಮಾಡಿದ್ದಾರೆ. ಇದನ್ನು ಕಾಂಗ್ರೆಸ್​ ನಲ್ಲಿ‌ ಇರೋರೇ ಸಹಿಸಲ್ಲ. ಹೀಗಾಗಿ ನಿನ್ನೆ ಕಾಂಗ್ರೆಸ್ ಕಾರ್ಯಕರ್ತ ಸಂಪತ್ ಸಿದ್ದರಾಮಯ್ಯರತ್ತ ಮೊಟ್ಟೆ ಎಸೆದಿದ್ದಾರೆ. ಸಿದ್ದರಾಮಯ್ಯಗೆ ಡಿಕೆಶಿಯವರೇ ಮೊಟ್ಟೆ ಹೊಡೆಸಿರಬೇಕು ಎಂದು ತಿಳಿಸಿದರು.

Join Whatsapp
Exit mobile version