ಡಿ.ಕೆ.ಶಿವಕುಮಾರ್ ಹೊಂದಾಣಿಕೆ ರಾಜಕಾರಣಿ: ರಮೇಶ್ ಜಾರಕಿಹೊಳಿ

Prasthutha|

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೊಂದಾಣಿಕೆ ರಾಜಕಾರಣಿ, ಅವರೇನೂ ಬದ್ಧತೆ ಇರುವ ದೊಡ್ಡ ನಾಯಕನಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೆ ಡಿಕೆಶಿ ವಿರುದ್ಧ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಪಕ್ಷದ ವರಿಷ್ಠರು ತನಗೆ ಯಾವುದೇ ಜವಾಬ್ದಾರಿ ನೀಡಿದರೂ, ಯಾವುದೇ ಜಿಲ್ಲೆಯ ಉಸ್ತುವಾರಿ ನಿರ್ವಹಿಸಿದರೂ ಒಪ್ಪಿಕೊಳ್ಳುತ್ತೇನೆ ಎಂದರು.
ನಾನು ಕನಕಪುರಕ್ಕೂ ಹೋಗಲು ತಯಾರಿದ್ದೇನೆ. ಡಿ.ಕೆ. ಶಿವಕುಮಾರ್ ಅಂಥ ದೊಡ್ಡ ನಾಯಕನಲ್ಲ. ಅಡ್ಜೆಸ್ಟ್ ಮೆಂಟ್ ರಾಜಕಾರಣಿ ಎಂದು ಕುಟುಕಿದರು.

Join Whatsapp