ವಿಜಯಪುರ: ರಾಜ್ಯ ಬಿಜೆಪಿ ಸರಕಾರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಖಂಡಿತಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿ.ಎಸ್ ಯಡಿಯೂರಪ್ಪ ಅವರಿಗೆ ಅವರ ಹೈಕಮಾಂಡ್ ಸೂಚಿಸಿತ್ತು. ಇದೀಗ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ಸರಕಾರದ ಮೇಲೂ ಅವರದೇ ಸಚಿವರು ಇದೀಗ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಬೊಮ್ಮಾಯಿ ಕೂಡ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಶಿವಕುಮಾರ್ ಹೇಳಿದ್ದಾರೆ