ಸಿಬಿಐ ತನಿಖೆಗೆ ಅನುಮತಿ ಕ್ರಮವನ್ನು ಪ್ರಶ್ನಿಸಿದ ರಿಟ್ ಅರ್ಜಿ ಹಿಂಪಡೆದ ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ತಮ್ಮ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಲಾದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ ರಿಟ್ ಅರ್ಜಿ ಮತ್ತು ಮೇಲ್ಮನವಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿಂಪಡೆದಿದ್ದಾರೆ.

- Advertisement -

ಅಂದಿನ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸಕಾರದ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಹೊರಿಸಿ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಇದನ್ನು ಆಧರಿಸಿ ಸಿಬಿಐ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಕೆಗೂ ತಯಾರಿ ನಡೆಸಿತ್ತು. ಸಿಬಿಐ ತನಿಖೆ ನಡೆಸುತ್ತಿರುವಾಗಲೇ ಶಿವಕುಮಾರ್ ರಾಜ್ಯ ಸರಕಾರ ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದರಾಮಯ್ಯ ಸರ್ಕಾರ ಇತ್ತೀಚೆಗೆ ವಾಪಸ್ ಪಡೆದಿದೆ. ಇದರ ಬೆನ್ನಿಗೆ ತಮ್ಮ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಲಾದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ ರಿಟ್ ಅರ್ಜಿ ಮತ್ತು ಮೇಲ್ಮನವಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿಂಪಡೆದಿದ್ದಾರೆ.

Join Whatsapp