ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಇದೀಗ ಇದಕ್ಕೆ ಡಿಕೆ ಶಿವಕುಮಾರ್ ಅವರ ಸಹೋದರ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಕಳಿಸಿ ಎಂದು ಅಮಿತ್ ಶಾಗೆ ಇವರೇ ಮನವಿ ಮಾಡಿ ಬಂದಿರಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಡಿಕೆ ಸುರೇಶ್, ಡಿಕೆ ಶಿವಕುಮಾರ್ ಅವರನ್ನ ತಿಹಾರ್ ಜೈಲಿಗೆ ಕಳಿಸಿ ಎಂದು ಬಹುಶಃ ಅಮಿತ್ ಶಾಗೆ ಇವರೇ (ಕುಮಾರಸ್ವಾಮಿ) ರಿಕ್ವೆಸ್ಟ್ ಮಾಡಿಕೊಂಡು ಬಂದಿರಬೇಕು. ದೆಹಲಿಗೆ ಹೋಗಿದ್ದರಲ್ಲ ಆಗ ಅಮಿತ್ ಶಾಗೆ ಮನವಿ ಮಾಡಿದ್ದರು ಅನ್ಸುತ್ತೆ. ಇವರ ಗೊಡ್ಡು ಬೆದರಿಕೆಗಳಿಗೆ ಹೆದರುವ ಜಾಯಮಾನ ನಮ್ಮದಲ್ಲ ಎಂದು ತಿರುಗೇಟು ನೀಡಿದರು.