ಸಂಸದ ಡಿಕೆ ಸುರೇಶ್ ಗೆ ಗುಂಡಿಕ್ಕಬೇಕು: ಈಶ್ವರಪ್ಪ ಹೇಳಿಕೆ ಕಾಂಗ್ರೆಸ್ ಕಿಡಿ

Prasthutha|

►‘ಗೋಡ್ಸೆ ಸಂತತಿ ಬಿಜೆಪಿ’ ಎಂದು ಆಕ್ರೋಶ

- Advertisement -

ಬೆಂಗಳೂರು: ಸಂಸದ ಡಿ.ಕೆ.ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿರುವುದಕ್ಕೆ ಕಾಂಗ್ರೆಸ್ ಕಿಡಿಕಾರಿದೆ.

ಈ ಕುರಿತು ಶುಕ್ರವಾರ X ನಲ್ಲಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ‘ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ‘ ಎಂದು ವಾಗ್ದಾಳಿ ನಡೆಸಿದೆ.

- Advertisement -


‘ಸಂಸದರಾದ ಡಿ. ಕೆ ಸುರೇಶ್ ಹಾಗೂ ಶಾಸಕರಾದ ವಿನಯ್ ಕುಲಕರ್ಣಿಯವರನ್ನು ಗುಂಡಿಕ್ಕಿ ಕೊಲ್ಲಬೇಕು ಎನ್ನುವ ಮೂಲಕ ಬಿಜೆಪಿಯ ಭಯೋತ್ಪಾದನೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ. ಈ “ಗುಂಡು“ ಹಾಕುವ ವ್ಯಕ್ತಿಯ ಮೇಲೆ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು’ ಎಂದು ಗೃಹ ಸಚಿವರಲ್ಲಿ ಮನವಿ ಮಾಡುತ್ತೇವೆ‘ ಎಂದು ಪೋಸ್ಟ್ ಮಾಡಿದೆ.



Join Whatsapp