ಸಂಸದ ಡಿಕೆ ಸುರೇಶ್ ಗೆ ಗುಂಡಿಕ್ಕಬೇಕು: ಈಶ್ವರಪ್ಪ ಹೇಳಿಕೆಗೆ ಎಚ್ ಕೆ ಪಾಟೀಲ್ ಎಚ್ಚರಿಕೆ

Prasthutha|

ಬೆಂಗಳೂರು: ದೇಶದ್ರೋಹಿ ಹೇಳಿಕೆ ನೀಡಿದ ಸಂಸದ ಡಿಕೆ ಸುರೇಶ್ ಗೆ ಗುಂಡಿಕ್ಕಬೇಕು ಎಂಬ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ ವಿಚಾರ, ‘ಈಶ್ವರಪ್ಪಗೆ ಸಚಿವ ಎಚ್ ಕೆ ಪಾಟೀಲ್ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

- Advertisement -


ಇಂಥಹ ಪ್ರಚೋದನಕಾರಿ ಮಾತುಗಳನ್ನು ಆಡಿದರೆ ಒಮ್ಮಿಂದೊಮ್ಮೆಲೆ ಹೀರೋ ಆಗುತ್ತೇವೆ ಎನ್ನುವ ಕಲ್ಪನಾ ಲೋಕದಲ್ಲಿ ಇರುತ್ತಾರೆ. ಆದ್ದರಿಂದಲೇ ಬಹಳ ದೊಡ್ಡ ಪ್ರಮಾದಗಳನ್ನು ಮಾಡುತ್ತಿರುತ್ತಾರೆ ಎಂದು ಕಿಡಿಕಾರಿದರು.


ರಾಜಕಾರಣದಲ್ಲಿ 40 ರಿಂದ 50 ವರ್ಷ ಇರುವಂತವರು ಈ ರೀತಿಯ ಮಾತುಗಳನ್ನಾಡುವುದು ಸಮಾಜದ ಮೇಲೆ ಬಹಳ ದುಷ್ಪರಿಣಾಮವನ್ನು ಬೀರುತ್ತವೆ. ಆದ್ದರಿಂದ 24 ಗಂಟೆಯೊಳಗೆ ಈಶ್ವರಪ್ಪ ತಮ್ಮ ಮಾತನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.



Join Whatsapp