ಒಂದೇ ವರ್ಷದಲ್ಲಿ ಡಿಕೆ ಸುರೇಶ್ ಆಸ್ತಿ ಮೌಲ್ಯ 239.34 ಕೋಟಿ ರೂ. ಹೆಚ್ಚಳ

Prasthutha|

ಬೃಹತ್ ರೋಡ್ ಶೋ ಬಳಿಕ ನಾಮಪತ್ರ ಸಲ್ಲಿಸಿದ ಡಿಕೆಸು

- Advertisement -

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಡಿ.ಕೆ. ಸುರೇಶ್​ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸುರೇಶ್​ ತಮ್ಮ ಹೆಸರಿನಲ್ಲಿ ಒಟ್ಟು 593.04 ಕೋಟಿ ರೂ. ಮೌಲ್ಯದ ಆಸ್ತಿ ಇರುವುದಾಗಿ ನಾಮಪತ್ರದ ಅಫಿಡೆವಿಟ್​ನಲ್ಲಿ ತಿಳಿಸಿದ್ದಾರೆ.

ಒಂದೇ ವರ್ಷದಲ್ಲಿ ಅವರ ಆಸ್ತಿ ಮೌಲ್ಯ ಬರೋಬ್ಬರಿ 239.34 ಕೋಟಿ ಹೆಚ್ಚಳವಾಗಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಘೋಷಿಸಿಕೊಂಡಿರುವುದಕ್ಕೆ ಹೋಲಿಸುವುದಾದರೆ 5 ವರ್ಷಗಳಲ್ಲಿ ಬರೋಬ್ಬರಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ.

- Advertisement -

ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಡಿ.ಕೆ. ಸುರೇಶ್ ನಾಮಪತ್ರ ಅಫಿಡವಿಟ್‌ನಲ್ಲಿ ಬರೋಬ್ಬರಿ 593.04 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ 333.86 ಕೋಟಿ ರೂಪಾಯಿ ಆಸ್ತಿ ಘೋಷಣೆ ಮಾಡಿದ್ದರು. 8 ತಿಂಗಳ ಹಿಂದೆ ನಡೆದ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಡಮ್ಮಿ ಅಭ್ಯರ್ಥಿಯಾಗಿ ಕನಕಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಸುರೇಶ್​ ತಮ್ಮ ಹೆಸರಿನಲ್ಲಿ 353.7 ಕೋಟಿ ರೂ. ಮೌಲ್ಯದ ಆಸ್ತಿ ಇರುವುದಾಗಿ ಘೋಷಿಸಿಕೊಂಡಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರದಲ್ಲಿ ಬೃಹತ್​ ರೋಡ್​ ಶೋ ನಡೆದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್​, ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತೆ ಅನೇಕ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು.

Join Whatsapp