ಮಂಗಳೂರು: ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸುವಂತೆ ರಾಜ್ಯ ಸರ್ಕಾರ ನೀಡಿದ ಆದೇಶದಂತೆ ಈ ವಾರಾಂತ್ಯವೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ಫ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಶನಿವಾರ ಮತ್ತು ಭಾನುವಾರ ವಾರಾಂತ್ಯ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಆದರೆ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದ.
ಭಾನುವಾರ ಕೋವಿಡ್ ನಿಯಮಗಳನ್ನು ಪಾಲಿಸಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸಾರ್ವಜನಿಕ ಸಭೆ ಸಮಾರಂಭ ನಡೆಸುವಂತಿಲ್ಲ. ನೆಹರೂ ಮೈದಾನದಲ್ಲಿ ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಸರಳವಾಗಿ ನಡೆಯಲಿದೆ ಎಂದು ತಿಳಿಸಿದರು.