ನಳಿನ್ ಕುಮಾರ್ ಕಟೀಲ್ ಗೆ ಏನೋ ಹೆಚ್ಚು ಕಮ್ಮಿ ಆಗಿದೆ, ಆಸ್ಪತ್ರೆಗೆ ಸೇರಿಸಬೇಕು : ಡಿಕೆಶಿ

Prasthutha: November 28, 2020

ಕಾರವಾರ : ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಗೆ ಏನೂ ಸ್ವಲ್ಪ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರು ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದರು. ಶಿರಸಿಯಲ್ಲಿ ನಡೆಯುವ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಲು ಶನಿವಾರ ಆಗಮಿಸಿದ್ದ ಡಿಕೆಶಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಮಾದಕ ದ್ರವ್ಯದಿಂದ ಸರಕಾರ ನಡೆಸಿದ್ದರೆ, ಇನ್ನೂ ಯಾಕೆ ಎಫ್ ಐಆರ್ ದಾಖಲಿಸಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ. ನಾನು ಕೂಡ ಸರಕಾರದ ಭಾಗವಾಗಿದ್ದೆ. ನನ್ನ ಮೇಲೂ ಎಫ್ ಐಆರ್ ಹಾಕಲಿ. ನಮ್ಮ ಸರಕಾರದಲ್ಲಿದ್ದವರು ಈಗ ಅವರ ಸರಕಾರದಲ್ಲಿದ್ದಾರಲ್ಲ, ಅವರ ಮೇಲೂ ಎಫ್ ಐಆರ್ ದಾಖಲಿಸಲಿ ಎಂದು ಡಿಕೆಶಿ ಸವಾಲು ಹಾಕಿದರು.

ನಳಿನ್ ಕುಮಾರ್ ಕಟೀಲ್ ಅವರಿಗೆ ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ. ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಬಂದ ಹಾಗೆ ಆಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.   

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ