ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಮೇಲೆ ಡಿಕೆಶಿ ಸಿಡಿ ಅಸ್ತ್ರ: ಬಿಜೆಪಿ ಅಭ್ಯರ್ಥಿ ರಾಜುಗೌಡ

Prasthutha|

ಯಾದಗಿರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿದೆ. ಹೀಗಾಗಿ ಲೋಕಸಭೆ ಚುನಾವಣೆ ಬಳಿಕ ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಲು ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅಥವಾ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಸಿಡಿ ಬಿಡಬಹುದು ಎಂದು ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜುಗೌಡ ಹೇಳಿದ್ದಾರೆ.

- Advertisement -


ಹುಣಸಗಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಣ್ಣನವರೆ ಹುಷಾರಾಗಿರಿ, ಡಿ.ಕೆ.ಶಿವಕುಮಾರ್ ಅಣ್ಣವರು ಸಿಡಿ ತಯಾರಿಸುವುದರಲ್ಲಿ ಎತ್ತಿದ ಕೈ ಎಂದು ಹೇಳಿದರು. ಮುಖ್ಯಮಂತ್ರಿ ಕುರ್ಚಿಗಾಗಿ ಡಿಕೆ ಶಿವಕುಮಾರ್ ಏನು ಬೇಕಾದರೂ ಮಾಡುತ್ತಾರೆ. ಸಿದ್ದರಾಮಯ್ಯ ಅಣ್ಣನವರೇ ಹುಷಾರಾಗಿರಿ ಎಂದರು.



Join Whatsapp